Friday, May 10, 2024
Homeತಾಜಾ ಸುದ್ದಿಈ ವಾರ ಕಿಚ್ಚನಿಲ್ಲದ ಬಿಗ್ ಬಾಸ್: ಕಾರಣ ಏನು ಗೊತ್ತಾ?

ಈ ವಾರ ಕಿಚ್ಚನಿಲ್ಲದ ಬಿಗ್ ಬಾಸ್: ಕಾರಣ ಏನು ಗೊತ್ತಾ?

spot_img
- Advertisement -
- Advertisement -

ಬೆಂಗಳೂರು:  ಈ ವಾರ ಕಿಚ್ಚ ಸುದೀಪ್ ಬಿಗ್ ಬಾಸ್ ಕಾರ್ಯಗ್ರಮದಲ್ಲಿ ಭಾಗಿಯಾಗುತ್ತಿಲ್ಲ. ಅನಾರೋಗ್ಯದ ಕಾರಣದಿಂದಾಗಿ ಸುದೀಪ್ ಈ ವಾರ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿರಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಕಲರ್ಸ್ ಕನ್ನಡ ಪ್ರೊಗ್ರಾಮಿಂಗ್ ಹೆಡ್ ಪರಮೇಶ್ವರ್ ಗುಂಡ್ಕಲ್ ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದು, ಇಷ್ಟು ಸೀಸನ್ನುಗಳಲ್ಲಿ ಇಂಥ ಸಂದರ್ಭ ಎದುರಾಗುತ್ತಿರುವುದು ಇದೇ ಮೊದಲು. ಆರೋಗ್ಯದ ತೊಂದರೆ ಇರುವುದರಿಂದ ಕಿಚ್ಚ ಸುದೀಪ್ ಅವರು ಈ ವಾರ ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗವಹಿಸುತ್ತಿಲ್ಲ. ಆದರೆ ನಾಳೆ ಮತ್ತು ರವಿವಾರ ಬಿಗ್ ಬಾಸ್ ಎಪಿಸೋಡುಗಳು ರಾತ್ರಿ ಒಂಬತ್ತು ಗಂಟೆಗೆ ಎಂದಿನಂತೆ ಪ್ರಸಾರ ಆಗಲಿವೆ.

ಜೊತೆಯಲ್ಲಿ ಈ ವಾರ ಅತಿಕಡಿಮೆ ಮತಗಳನ್ನು ಪಡೆದ ಒಬ್ಬರು ಕಂಟೆಸ್ಟೆಂಟ್ ಮನೆಯಿಂದ ಹೊರಹೋಗಲಿದ್ದಾರೆ. ಈ ಎಲಿಮಿನೇಷನ್ ಹೇಗೆ ನಡೆಯುತ್ತದೆ ಎನ್ನುವ ಕುತೂಹಲ ನಿಮಗಿದ್ದರೆ ಹೇಗೆಲ್ಲಾ ಮಾಡಬಹುದು ಎಂಬ ಆಯ್ಕೆಗಳನ್ನು ಎದುರಿಗೆ ಇಟ್ಟುಕೊಂಡು ಬಿಗ್ ಬಾಸ್ ತಂಡ ಕೆಲಸ ಮಾಡುತ್ತಿದೆ. ನಿಮ್ಮ ಕುತೂಹಲಕ್ಕೆ, ಪ್ರೀತಿಗೆ ಮತ್ತು ಶುಭಹಾರೈಕೆಗಳಿಗೆ ಧನ್ಯವಾದಗಳು ! ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!