Tuesday, April 30, 2024
Homeತಾಜಾ ಸುದ್ದಿರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ; ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ; ಕನ್ನಡದಲ್ಲೇ ಪ್ರಮಾಣವಚನ ಸ್ವೀಕಾರ

spot_img
- Advertisement -
- Advertisement -

ನವದೆಹಲಿ: ಇನ್ಫೋಸಿಸ್‌ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಅವರ ಪತಿ ಎನ್ ಆರ್ ನಾರಾಯಣ ಮೂರ್ತಿ ಉಪಸ್ಥಿತರಿದ್ದರು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಸಂಸತ್ ಭವನದ ತಮ್ಮ ಕೊಠಡಿಯಲ್ಲಿ ಪ್ರಮಾಣ ವಚನ ಬೋಧಿಸಿದರು.ಸುಧಾಮೂರ್ತಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಸದನದ ನಾಯಕ ಪಿಯೂಷ್ ಗೋಯಲ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷ ಮತ್ತು ಮಕ್ಕಳಿಗಾಗಿ ಹಲವಾರು ಪುಸ್ತಕಗಳ ಲೇಖಕರಾಗಿರುವ 73 ವರ್ಷದ ಮೂರ್ತಿ ಅವರನ್ನು ಕಳೆದ ಶುಕ್ರವಾರ ಅಂತರರಾಷ್ಟ್ರೀಯ ಮಹಿಳಾ ದಿನದಂದು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

- Advertisement -
spot_img

Latest News

error: Content is protected !!