- Advertisement -
- Advertisement -
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಇಂದು ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಐದು ವರ್ಷಗಳ ಕಾಲ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ.
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಪತ್ನಿಯಾಗಿರುವ ಸುಧಾ ಯಾದವ್ ಅವರು ರಸಾಯನಶಾಸ್ತ್ರದಲ್ಲಿ ಪಿಎಚ್ಡಿ ಪಡೆದಿದ್ದಾರೆ. ಮಾಜಿ ಲೋಕಸಭಾ ಸಂಸದೆಯಾಗಿರುವ ಅವರು, ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಪ್ರಮುಖ ಸದಸ್ಯೆಯಾಗಿದ್ದಾರೆ.
ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು.
- Advertisement -


