Thursday, June 4, 2026
Homeತಾಜಾ ಸುದ್ದಿಚಿತ್ರರಂಗಕ್ಕೆ ಮತ್ತೊಂದು ಆಘಾತ;  ನೇಣು ಬಿಗಿದುಕೊಂಡು ಯುವ ನಟ ಆತ್ಮಹತ್ಯೆ

ಚಿತ್ರರಂಗಕ್ಕೆ ಮತ್ತೊಂದು ಆಘಾತ;  ನೇಣು ಬಿಗಿದುಕೊಂಡು ಯುವ ನಟ ಆತ್ಮಹತ್ಯೆ

- Advertisement -
- Advertisement -

ಹೈದರಾಬಾದ್ : ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ.ತೆಲುಗು ಸಿನಿಮಾ ರಂಗದ ಯುವನಟರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡ ನಟ.

ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಸುಷ್ಮಿತಾ ನಿರ್ಮಾಣದಲ್ಲಿ ಮೂಡಿ ಬಂದಿದ್ದ ಶೂಟೌಟ್ ವೆಬ್ ಸಿರೀಸ್ ನಲ್ಲಿ ನಟಿಸಿದ್ದ ಹಾಗೂ ‘ಸೆಕೆಂಡ್ ಹ್ಯಾಂಡ್’ ಸಿನಿಮಾದ ಮೂಲಕ ತೆಲುಗು ಚಿತ್ರೋದ್ಯಮದಲ್ಲಿ ಹೆಸರು ಗಳಿಸಿದ್ದ ಸುಧೀರ್ ವರ್ಮಾ ವೈಯಕ್ತಿಕ ಕಾರಣಗಳಿಂದಾಗಿ ನಿನ್ನೆ ತಮ್ಮ ವೈಜಾಗ್ ನ ಮನೆಯಲ್ಲಿ ಬದುಕನ್ನು ಅಂತ್ಯಗೊಳಿಸಿದ್ದಾರೆ.

ಸೆಕೆಂಡ್ ಹ್ಯಾಂಡ್, ಕುಂದನಪು ಬೊಮ್ಮ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದ ಸುಧೀರ್, ಎರಡೂ ಚಿತ್ರಗಳ ಮೂಲಕ ಒಳ್ಳೆಯ ಹೆಸರನ್ನು ಸಂಪಾದಿಸಿದ್ದರು. ಆದರೆ, ಹೇಳಿಕೊಳ್ಳುವಂತಹ ಅವಕಾಶ ಅವರಿಗೆ ಸಿಗಲಿಲ್ಲ. ಹಾಗಾಗಿ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಪೊಲೀಸರು ಅವರ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!