Thursday, June 4, 2026
Homeಕರಾವಳಿಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಸಹಕರಿಸಿದ ಮತ್ತೋರ್ವ ಆರೋಪಿಯ ಬಂಧನ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಸಹಕರಿಸಿದ ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಸಹಕರಿಸಿದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೌಶಾದ್ ಅಲಿಯಾಸ್ ಚೋಟೆ ನೌಶಾದ್(39) ಬಂಧಿತ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇಲ್ಲಿನ ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿ ಹೋಟೆಲ್ ನಡೆಸುತ್ತಿದ್ದ ಆರೋಪಿಯು ಕೆ.ಆರ್.ಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಕೊಲೆಗೆ ಸಂಚು ರೂಪಿಸಲು ನೆರವು ನೀಡಿದ ಆರೋಪದ ಮೇರೆಗೆ ಆತನನ್ನು ಬಂಧಿಸಲಾಗಿದೆ.

ಅಂದಹಾಗೆ ಆತನ ವಿರುದ್ಧ ಸುರತ್ಕಲ್, ಬಜ್ಪೆ, ಮೂಡುಬಿದರೆ, ಮಂಗಳೂರು, ಉತ್ತರ ಬಂಟ್ವಾಳ ಗ್ರಾಮಾಂತರ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಇನ್ನು ಆರೋಪಿಯೊ ಹೋಟೆಲ್ ಉದ್ಯಮ ನಡೆಸುತ್ತಿದ್ದು ಈ ಘಟನೆ ನಡೆದ ಬಳಿಕ ಹೋಟೆಲ್ ಅನ್ನು ಬಂದ್ ಮಾಡಿ ನಾಪತ್ತೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!