Tuesday, May 14, 2024
Homeತಾಜಾ ಸುದ್ದಿಸುಳ್ಯದ ಹಿರಿಯ ಸಾಹಿತಿ ವಿದ್ವಾನ್ ಟಿ.ಜಿ.ಮುಡೂರು ಇನ್ನಿಲ್ಲ

ಸುಳ್ಯದ ಹಿರಿಯ ಸಾಹಿತಿ ವಿದ್ವಾನ್ ಟಿ.ಜಿ.ಮುಡೂರು ಇನ್ನಿಲ್ಲ

spot_img
- Advertisement -
- Advertisement -

ಸುಳ್ಯ: ಹಿರಿಯ ಸಾಹಿತಿ, ವಿದ್ವಾನ್ ಟಿ.ಜಿ.ಮುಡೂರು ನಿನ್ನೆ ಪುತ್ತೂರಿನ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು ಹಾಗು ಓರ್ವ ಪುತ್ರ ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಅಧ್ಯಾಪಕ , ಕೃಷಿಕ , ಕವಿ , ವಿದ್ವಾಂಸರಾಗಿ ಹೆಸರು ಮಾಡಿದ್ದ ತಮ್ಮಯ್ಯ ಗೌಡ ಮುಡೂರವರು ಕನ್ನಡ, ತುಳು, ಅರೆಭಾಷೆ ಈ ಮೂರು ಭಾಷೆಗಳಲ್ಲಿ ಕೈಯಾಡಿಸಿದವರು ಅಲ್ಲದೇ ‘ಹೃದಯರೂಪಕ‘ ಎಂಬ ಆಂಗ್ಲ ನಾಟಕದ ರೂಪಾಂತರ ಕೃತಿಯನ್ನೂ ಪ್ರಕಟಿಸಿದ್ದಾರೆ.

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದಲ್ಲಿ ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ 15 ವರ್ಷಗಳ ಕಾಲ, ಸುಳ್ಯ ಘಟಕವಾದಾಗ ತಾಲೂಕ ಕ.ಸಾ.ಪ. ಅಧ್ಯಕ್ಷರಾಗಿ 3 ವರ್ಷ ಕಾರ್ಯ ನಿರ್ವಹಿಸಿರುತ್ತಾರೆ. ಸುಬ್ರಹ್ಮಣ್ಯ , ಪಂಜ , ಅಡ್ಕಾರುಗಳಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನಗಳು ಇವರ ನೇತೃತ್ವದಲ್ಲಿ ಸಂಘಟಿಸಲ್ಪಟ್ಟಿದೆ . ಸುಳ್ಯದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ಇವರ ನೇತೃತ್ವದಲ್ಲಿ ನಡೆದಿದೆ. 1997 ರಲ್ಲಿ ಅರಂತೋಡುನಲ್ಲಿ ಜರಗಿದ ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ರಾಜ್ಯೋತ್ಸವ ಪ್ರಶಸ್ತಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಸುವರ್ಣ ಕರ್ನಾಟಕ ಸಂಸ್ಕೃತಿ ದಿಬ್ಬಣದಲ್ಲಿ ಸುಳ್ಯದಲ್ಲಿ ಇವರನ್ನು ಸನ್ಮಾನಿಸುವುದರ ಜೊತೆಗೆ ‘ ಟಿ.ಜಿ.ಮುಡೂರು ಬದುಕು ಬರಹಗಳ ಅಭಿನಂದನಾ ಗ್ರಂಥ- ನಂದಾದೀಪವನ್ನು ಅರ್ಪಿಸಿ ಅದ್ದೂರಿಯಾಗಿ ಪಂಜದಲ್ಲಿ ಸನ್ಮಾನಿಸಿರುವುದು ಇವರ ಜನಪ್ರಿಯತೆಗೆ ಸಾಕ್ಷಿ.

ಸಾಂಸ್ಕೃತಿಕ, ಧಾರ್ಮಿಕ , ಶೈಕ್ಷಣಿಕ ಸಂಸ್ಥೆಗಳ ಜೊತೆ ನಿಕಟ ಸಂಪರ್ಕವನ್ನಿರಿಸಿಕೊಂಡು ಸಕ್ರಿಯವಾಗಿ ತೊಡಗಿಸಿಕೊಂಡು ಸಂತೃಪ್ತ ಜೀವನ ನಡೆಸುವ ಕ್ರಿಯಾಶೀಲ ವ್ಯಕ್ತಿತ್ವದ ಅಪಾರ ಪಾಂಡಿತ್ಯದ ಶ್ರೀ ಮುಡೂರುರವರು ಸುಳ್ಯ ಕಂಡ ಅಪರೂಪದ ಸಾಹಿತಿಯಾಗಿದ್ದರು

- Advertisement -
spot_img

Latest News

error: Content is protected !!