- Advertisement -
- Advertisement -
ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾತೀರ್ಥ ಸ್ನಾನವು ಸೆಪ್ಟೆಂಬರ್ 11 ರಿಂದ 14 ರವರೆಗೆ (ಭಾದ್ರಪದ ಶುಕ್ಲ ಚೌತಿ) ಜರಗಲಿದೆ.
ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು (ಏಣಿ) ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ನೆರವೇರಲಿದ್ದು, ತದನಂತರ ಭಕ್ತಾದಿಗಳಿಗೆ ತೀರ್ಥ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಭಕ್ತಾದಿಗಳು ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಪು ಧರಿಸಿ ಆಗಮಿಸಬೇಕೆಂದು ವಿನಂತಿಸಲಾಗಿದೆ. ಅಲ್ಲದೆ, ಗುಹಾತೀರ್ಥದ ಒಳಭಾಗದಲ್ಲಿ ಛಾಯಾಗ್ರಹಣ ಮತ್ತು ವೀಡಿಯೋ ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಡಳಿತ ಮಂಡಳಿ ಸೂಚಿಸಿದೆ.
- Advertisement -


