- Advertisement -
- Advertisement -
ಸುಳ್ಯ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯು ಸುಳ್ಯದ ಹಾಸ್ಟೆಲ್ನಲ್ಲಿ ವಾಸ್ತವ್ಯವಿದ್ದು, ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಕಳೆದ ಒಂದು ವಾರದಿಂದ ಆಕೆ ಕಾಣೆಯಾಗಿದ್ದು, ಎಲ್ಲೂ ಪತ್ತೆಯಾಗಿಲ್ಲ. ಈ ಕುರಿತು ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿರುವ ದೂರಿನ ಅನ್ವಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
- Advertisement -


