Saturday, June 6, 2026
Homeಕರಾವಳಿಲಾಕ್ ಡೌನ್ ನಿಂದಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಲಾಕ್ ಡೌನ್ ನಿಂದಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಂದೂಡಿಕೆ

- Advertisement -
- Advertisement -

ಸುಳ್ಯ: ಕೊರೊನಾ ವೈರಸ್ ಲಾಕ್ ಡೌನ್ ಹಿನ್ನಲೆಯಿಂದಾಗಿ ಮೇ 13 ರಿಂದ ಮೇ 18 ರವರೆಗೆ ನಡೆಯಬೇಕಾಗಿದ್ದ ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ಮುಂದೂಡಲಾಗಿದೆ.
ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಬೇಕಾಗಿದ್ದ ಬ್ರಹ್ಮಕಲಶೋತ್ಸವಕ್ಕೆ ಪೂರ್ವತಯಾರಿಯಾಗಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದವು. ಸಭೆಯಲ್ಲಿ ವಿವಿಧ ಸಮಿತಿಗಳನ್ನು ಮಾಡಿ ಸಮಿತಿಯವರಿಗೆ ಜವಾಬ್ದಾರಿಯನ್ನು ಕೂಡ ಹಂಚಲಾಗಿತ್ತು.
ಆದರೆ ಸರಕಾರವು ಕೊರೊನಾ ವೈರಸನ್ನು ತಡೆಗಟ್ಟಲು ಕೈಗೊಂಡ ನಿಯಮದಿಂದ ಬ್ರಹ್ಮಕಲಶೋತ್ಸವವನ್ನು ಮುಂದುವರೆಸಲಾಗಿದೆ. ಭಕ್ತಾಭಿಮಾನಿಗಳು ಸಹಕರಿಸಬೇಕೆಂದು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ಮತ್ತು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!