Wednesday, October 7, 2026
Homeಕರಾವಳಿಮಂಗಳೂರುಸುಳ್ಯ: ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಯ ಹೊಂಡಕ್ಕೆ ಬಿದ್ದ ಮಗು

ಸುಳ್ಯ: ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಯ ಹೊಂಡಕ್ಕೆ ಬಿದ್ದ ಮಗು

- Advertisement -
- Advertisement -

ಸುಳ್ಯ : ನಗರದ ಶ್ರೀರಾಂಪೇಟೆಯ ಮುಳಿಯ ಜ್ಯುವೆಲ್ಲರ್ಸ್ ಎದುರು ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿದ್ದ ವೇಳೆ ತೆರೆದ ಚರಂಡಿಗೆ ಬಿದ್ದು ಮಗುವೊಂದು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಸಂಭವಿಸಿದೆ.

ಜೆಸಿಬಿ ಯಂತ್ರ ಬಳಸಿ ರಸ್ತೆ ಬದಿ ಅಗೆದು ಕಾಮಗಾರಿ ನಡೆಸಲಾಗುತ್ತಿದ್ದು, ಫುಟ್‌ಪಾತ್ ಚರಂಡಿಯ ಮೇಲಿದ್ದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲಾಗಿತ್ತು. ಕುಟುಂಬ ಸದಸ್ಯರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಗು, ಕಾಮಗಾರಿಯನ್ನು ವೀಕ್ಷಿಸುತ್ತಿದ್ದಾಗ ಮುಚ್ಚದ ಚರಂಡಿಗೆ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಧಾವಿಸಿ ಮಗುವನ್ನು ಮೇಲಕ್ಕೆತ್ತಿದ್ದು, ಅದೃಷ್ಟವಶಾತ್ ಮಗುವಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.

ನಿರ್ಮಾಣ ಸ್ಥಳದಲ್ಲಿ ಯಾವುದೇ ಸುರಕ್ಷತಾ ಬ್ಯಾರಿಕೇಡ್‌ಗಳನ್ನು ಅಳವಡಿಸದೇ ಇರುವುದೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಸಾರ್ವಜನಿಕರು ಹಾಗೂ ಮಕ್ಕಳು ಓಡಾಡುವ ಪ್ರದೇಶಗಳಲ್ಲಿ ಕಾಮಗಾರಿ ನಡೆಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!