- Advertisement -
![]()
- Advertisement -
ಸುಳ್ಯ; ದಿನಾಂಕ 17/08/2025 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ಸತೀಶ್ (45) ಎಂಬಾತನಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.
ದಿನಾಂಕ:18.03.2026 ರಂದು ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಿವಣ್ಣ ಹೆಚ್ ಆರ್ ರವರು ಆರೋಪಿಗೆಕಲಂ 331(4) BNS ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ. ಕಲಂ 305 BNS ರಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ. ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.
ಈ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಪಿ.ಎಸ್.ಐ ಕಾರ್ತಿಕ್ ರವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಿ ರವರು ಸಮರ್ಥವಾಗಿ ವಾದ ಮಂಡನೆ ನಡೆಸಿರುತ್ತಾರೆ.
- Advertisement -


