Wednesday, June 24, 2026
Homeಕರಾವಳಿಮಂಗಳೂರು ಸುಳ್ಯ; ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಲ್ಟಿ; ಮಗು ಸೇರಿದಂತೆ ನಾಲ್ವರು ಪ್ರಯಾಣಿಕರಿಗೆ ಗಾಯ

 ಸುಳ್ಯ; ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಲ್ಟಿ; ಮಗು ಸೇರಿದಂತೆ ನಾಲ್ವರು ಪ್ರಯಾಣಿಕರಿಗೆ ಗಾಯ

- Advertisement -
- Advertisement -

 ಸುಳ್ಯ; ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಲ್ಟಿಯಾಗಿ ಮಗು ಸೇರಿದಂತೆ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಸಂಪಾಜೆ ಸಮೀಪದ ದೇವರಕೊಲ್ಲಿ ಎಂಬಲ್ಲಿ ನಡೆದಿದೆ.


ವಿರಾಜಪೇಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ಪಲ್ಟಿ ಹೊಡೆದಿದೆ.ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!