Saturday, June 6, 2026
Homeಕರಾವಳಿಸುಳ್ಯ: ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣ ವಿಭಾಗದಿಂದ ಪೂರ್ವ ತಯಾರಿ ಸಭೆ

ಸುಳ್ಯ: ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಕುರಿತು ಸಾಮಾಜಿಕ ಜಾಲತಾಣ ವಿಭಾಗದಿಂದ ಪೂರ್ವ ತಯಾರಿ ಸಭೆ

- Advertisement -
- Advertisement -

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸಾಮಾಜಿಕ ಜಾಲತಾಣ ವಿಭಾಗದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕ ರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವೀಕ್ಷಕರು ಗಳ ಸಭೆ ಇಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುದೀರ್ ರೈ ಮೇನಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಬೆಳ್ಳಾರೆ ಸೊಸೈಟಿ ಅಧ್ಯಕ್ಷ ಅನಿಲ್ ರೈ ಬೆಳ್ಳಾರೆ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರಾದ ಶ್ರೀಮತಿ ಪ್ರವೀಣ ರೈ ಮರುವಂಜ, ಎಸ್ ಟಿ ಘಟಕ ಅಧ್ಯಕ್ಷ ಪರಮೇಶ್ವರ ಕೆಂಬಾರೆ, ಸಾಮಾಜಿಕ ಜಾಲತಾಣ ಮುಖ್ಯಸ್ಥ ರಾದ ಸಚಿನ್ ರಾಜ್ ಶೆಟ್ಟಿ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಪ್ರಮುಖ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

ಬ್ಲಾಕ್ ಕಾಂಗ್ರೆಸ್ ಮಾದ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ ಪ್ರತಿಜ್ಞಾ ಕಾರ್ಯಕ್ರಮದ ಮಾಹಿತಿ ನೀಡಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಹರಿ ಕುಕ್ಕುಡೇಲು ಸ್ವಾಗತಿಸಿದರು. ಶಶಿಧರ ಎಂ.ಜೆ ಕಾರ್ಯಕ್ರಮ ನಿರೂಪಿಸಿದರು.

- Advertisement -

Latest News

error: Content is protected !!