Sunday, June 7, 2026
Homeಕರಾವಳಿಸುಳ್ಯ : ಅರಂತೋಡಿನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸುಳ್ಯ : ಅರಂತೋಡಿನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡಿನ ಬಿಳಿಯಾರಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ ಬಿಳಿಯಾರಿನ ಗೋಪಾಲ ಗೌಡ ಆತ್ಮಹತ್ಯೆ ಮಾಡಿಕೊಂಡವರು.

ಗೋಪಾಲ ಗೌಡರು ತಮ್ಮ ಮನೆಯ ಸಮೀಪದಲ್ಲಿರುವ ಹಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಇಂದು ಬೆಳಗ್ಗಿನ ಜಾವ ಮನೆಯವರು ಎದ್ದು ನೋಡಿದಾಗ ಗೋಪಾಲ ಗೌಡರು ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದ್ದಾರೆ. ಆಗ ತಮ್ಮ ಹಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾತ್ರಿ ಎಲ್ಲರೂ ಮಲಗಿದ ಮೇಲೆ ಅವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎನ್ನಲಾಗಿದೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಆಗಲಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!