Friday, June 26, 2026
Homeಕರಾವಳಿಮಂಗಳೂರುಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಹಗ್ಗ ತುಂಡಾಗಿ ಬಿದ್ದು ಗಂಭೀರ ಗಾಯ: ಚಿಕಿತ್ಸೆ ಫಲಿಸದೇ...

ಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಹಗ್ಗ ತುಂಡಾಗಿ ಬಿದ್ದು ಗಂಭೀರ ಗಾಯ: ಚಿಕಿತ್ಸೆ ಫಲಿಸದೇ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಹಗ್ಗ ತುಂಡಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯದ ಐವರ್ನಾಡು ಗ್ರಾಮದ ಮಾಧವ (60) ಮೃತ ವ್ಯಕ್ತಿ. ಮಾಧವ ಅವರು ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದರು.  ಮಾಧವ ಅವರು ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಸುಳ್ಯ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ  ಚಿಕಿತ್ಸೆ ಫಲಕಾರಿಯಾಗದೇ ಮಾಧವ ಅವರು ಕೊನೆಯುಸಿರಎಳೆದಿದ್ದಾರೆ. ಸುಳ್ಯ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!