- Advertisement -
![]()
- Advertisement -
ಸುಳ್ಯ; ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ಕುದ್ಮಾರು ಎಂಬಲ್ಲಿ ನಡೆದಿದೆ. ಕುದ್ಮಾರು ಗ್ರಾಮದ ನಿವಾಸಿ ಬಾಬು ಗೌಡ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡಿದ್ದ ಬಾಬು ಗೌಡ ಅವರು ಕಳೆದ 3 ತಿಂಗಳಿನಿಂದ ತೀವ್ರವಾದ ಹೊಟ್ಟೆನೋವು ಮತ್ತು ಗ್ಯಾಸ್ಟಿಕ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೇ ಇದ್ದದ್ದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಇದೇ ಯೋಚನೆಯಲ್ಲಿ ಬಾಬು ಗೌಡ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ, ಸ್ನಾನದ ಕೋಣೆಯ ಮಾಡಿನ ಕಬ್ಬಿಣದ ರಾಡ್‌ಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ಸುನಂದಾ (42) ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
- Advertisement -


