- Advertisement -
- Advertisement -
ಸುಳ್ಯ: ಸುಳ್ಯ ತಾಲೂಕಿನಿಂದ ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಲಾಗಿದ್ದು, ಆಕೆಯನ್ನು ಕರೆದೊಯ್ದಿದ್ದ ಯುವಕನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರವೀಣ್ ಬಂಧಿತ ಆರೋಪಿ.
ಮನೆಯಿಂದ ಶಾಲೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮನೆಗೆ ಹಿಂತಿರುಗದಿದ್ದಾಗ ಪೋಷಕರು ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು, ಯುವಕ ಪ್ರವೀಣ್ ಬಾಲಕಿಯನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆದೊಯ್ದಿರುವುದನ್ನು ಪತ್ತೆಹಚ್ಚಿ, ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಬಂಧಿತ ಆರೋಪಿ ಪ್ರವೀಣ್ ವಿರುದ್ಧ ಅಪ್ರಾಪ್ತರ ಅಪಹರಣ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಸುಳ್ಯ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -


