Saturday, June 6, 2026
Homeಕರಾವಳಿಸುಳ್ಯದಲ್ಲಿ ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾದ ಪ್ರಕರಣ: ಆರೋಪಿ ಪತಿಯನ್ನು ಬಂಧಿಸಿದ ಪೊಲೀಸರು

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾದ ಪ್ರಕರಣ: ಆರೋಪಿ ಪತಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ಮೃತದೇಹವನ್ನು ತುಂಬಿಸಿ ಪತಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪಶ್ಚಿಮ ಬಂಗಾಳದ ಪೊಲೀಸರ ಸಹಾಯದಿಂದ ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿದ್ದ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.ಈ ಕುರಿತು ಪಕ್ಕದ ರೂಂ ನವರಿಗೆ ಸಂಶಯ ಮೂಡಿ ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು.

ಇದೀಗ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!