- Advertisement -
![]()
- Advertisement -
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಒಂದು ಮನೆಯೊಂದಕ್ಕೆ ನುಗ್ಗಿದ ಘಟನೆ ಸುಳ್ಯದಲ್ಲಿ ನಡೆದಿದೆ. ಕುರುಂಜಿಗುಡ್ಡೆ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಚಲಿಸಿ ಮನೆಯೊಂದಕ್ಕೆ ನುಗ್ಗಿದೆ ಎನ್ನಲಾಗಿದೆ.
ಮಂಡ್ಯ ನೋಂದಣಿ ಹೊಂದಿರುವ ಪಿಕಪ್ ವಾಹನವು ಕುರುಂಜಿಗುಡ್ಡೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ಹಿಂಬದಿಗೆ ಚಲಿಸಿದೆ . ಬಳಿಕ ರಸ್ತೆ ಬದಿಯಲ್ಲಿದ್ದ ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆಯ ಒಂದು ಬದಿಯ ಗೋಡೆ ಹಾಗೂ ಇತರ ಭಾಗಗಳು ಜಖಂಗೊಂಡಿವೆ. ಅದೃಷ್ಟವಶಾತ್ ಪಿಕಪ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
- Advertisement -


