Sunday, October 11, 2026
Homeಕರಾವಳಿಮಂಗಳೂರುಸುಳ್ಯ; ಸಂಪಾಜೆಯಲ್ಲಿ ಫಾತಿಮಾ ನಿಶಾನ ಅನುಮಾನಾಸ್ಪದ ಸಾವು ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು

ಸುಳ್ಯ; ಸಂಪಾಜೆಯಲ್ಲಿ ಫಾತಿಮಾ ನಿಶಾನ ಅನುಮಾನಾಸ್ಪದ ಸಾವು ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು

- Advertisement -
- Advertisement -

ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿ ಕಡಪಾಲದ ಫಾತಿಮಾ ನಿಶಾನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ಮೂವರೂ ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಮೃತಳ ತಾಯಿ ಜುಬೈದ ನೀಡಿದ ದೂರಿನಂತೆ ಸುಳ್ಯ ಪೊಲೀಸರು ಅಲವಿ, ಆಯಿಷಾ ಹಾಗೂ ಫಸೀಲಾ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಜುಲೈ 23ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಪ್ರಕರಣದ ಆರೋಪಿಗಳಾದ ಆಯಿಷಾ ಮತ್ತು ಫಸೀಲಾ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಆಗಸ್ಟ್ 31ರಂದು ಜಾಮೀನು ನೀಡಿತ್ತು. ಇದೀಗ ಪ್ರಮುಖ ಆರೋಪಿ ಅಲವಿ ಅವರಿಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ್ ಅವರು ಅಕ್ಟೋಬರ್ 5ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಇದರಿಂದಾಗಿ ಪ್ರಕರಣದ ಎಲ್ಲಾ ಆರೋಪಿಗಳೂ ಜಾಮೀನಿನ ಮೇಲೆ ಬಿಡುಗಡೆಯಾದಂತಾಗಿದೆ.

ಆರೋಪಿಗಳ ಪರವಾಗಿ ಸುಳ್ಯದ ಹಿರಿಯ ನ್ಯಾಯವಾದಿ ಎಂ. ವೆಂಕಪ್ಪ ಗೌಡ, ಚಂಪಾ ವಿ. ಗೌಡ, ರಾಜೇಶ್ ಬಿ.ಜಿ., ಶ್ಯಾಮ್ ಪ್ರಸಾದ್ ಎನ್.ಕೆ. ಹಾಗೂ ವಿಮಲೇಶ್ ಆರ್. ಗೌಡ ವಾದ ಮಂಡಿಸಿದ್ದರು.

- Advertisement -

Latest News

error: Content is protected !!