- Advertisement -
![]()
- Advertisement -
ಸುಳ್ಯ; ಮೇ. 11 ರಂದು ವಿವಾಹ ನಿಗದಿಯಾಗಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದೆ. ಜರ್ನಾದನ ಆತ್ಮಹತ್ಯೆಗೆ ಯತ್ನಿಸಿದವರು.
ಜನಾರ್ದನ ಎಂಬವರಿಗೆ ಮೇ. 11 ರಂದು ಮದುವೆ ನಿಗದಿಯಾಗಿತ್ತು. ಮದುವೆಯ ಎಲ್ಲಾ ಸಿದ್ಧತೆಗಳು ನಡೆದಿತ್ತು. ನಾಳೆ ಮೆಹಂದಿ ಕಾರ್ಯಕ್ರಮ ನಡೆಯಲಿತ್ತು. ನಿನ್ನೆ ಬೆಳಗ್ಗಿನ 10 ಗಂಟೆಯ ವೇಳೆಗೆ ಜನಾರ್ದನರವರು ವಿಷ ಸೇವಿಸಿ ಅಸ್ವಸ್ಥಗೊಂಡಿರುವುದು ಮನೆಯವರಿಗೆ ಗೊತ್ತಾಗಿದೆ. ತಕ್ಷಣ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಯಿತು. ಇದೀಗ ಜನಾರ್ದನರವರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿರೋದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
- Advertisement -


