ಸುಳ್ಯ;ಮನೆಗಳ್ಳತನ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್ (24) ಬಂಧಿತ ಆರೋಪಿ.
ದಿನಾಂಕ 24.03.2022 ರಂದು ರಾತ್ರಿ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಶರತ್ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆತನನ್ನು ಬೆಳ್ಳಾರೆ ಠಾಣಾ ಪಿ.ಎಸ್.ಐ ರವರು ಹಾಗೂ ಸಿಬ್ಬಂದಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರಾದ ಶಿವಣ್ಣ ಹೆಚ್ ಆರ್ ರವರು ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾರಣ ಸಜೆ ಹಾಗೂ 500 ದಂಡ ಹಾಗೂ 10 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡವನ್ನು ವಿಧಿಸಿದ್ದು, ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿರುತ್ತಾರೆ.
ಪ್ರಕರಣದ ತನಿಖಾಧಿಕಾರಿಗಳಾಗಿ ಸಂತೋಷ ಬಿ ಪಿ, ಪಿ ಎಸ್ ಐ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಪ್ರೀತಿ ಎಂ ಸಿ ರವರು ಸಮರ್ಥ ವಾದ ಮಂಡನೆ ನಡೆಸಿರುತ್ತಾರೆ. ಮುಂದುವರಿದಂತೆ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯ ರೂ 1000 ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿರುತ್ತದೆ.


