Wednesday, July 15, 2026
Homeಕರಾವಳಿಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಸುಲ್ತಾನ್ ಬತ್ತೇರಿ-ತಣ್ಣೀರುಬಾವಿ ಸಂಪರ್ಕ ಸೇತುವೆ

ಸೆಪ್ಟೆಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಸುಲ್ತಾನ್ ಬತ್ತೇರಿ-ತಣ್ಣೀರುಬಾವಿ ಸಂಪರ್ಕ ಸೇತುವೆ

- Advertisement -
- Advertisement -

ಮಂಗಳೂರು: ಇಲ್ಲಿನ ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ಸೇತುವೆ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಡಿ 64 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗುತ್ತಿದೆ. ಬೆಂಗ್ರೆ ಪ್ರದೇಶದ ಸುಮಾರು 4,000 ಕುಟುಂಬಗಳಿಗೆ ನಗರಕ್ಕೆ ಬರಲು ಹತ್ತಿರವಾಗಲಿದೆ. ಪ್ರಸ್ತುತ ಜನರು ದೋಣಿ (ಫೆರ್ರಿ) ಅವಲಂಬಿಸಿದ್ದಾರೆ ಅಥವಾ ಸುತ್ತು ಬಳಸಿ ಬರಬೇಕಿದೆ.ಇದು ‘ಬೋಸ್ಟ್ರಿಂಗ್’ ಮಾದರಿಯ ಸೇತುವೆಯಾಗಿದ್ದು, ನದಿಯಲ್ಲಿ ದೋಣಿಗಳ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ವಿನ್ಯಾಸಗೊಳಿಸಲಾಗಿದೆ. ಬ್ಲೂ ಫ್ಲಾಗ್ ಬೀಚ್‌ಗೆ ಇದು ಎರಡನೇ ಸಂಪರ್ಕ ರಸ್ತೆಯಾಗಲಿದ್ದು, ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ವೇಗ ಸಿಗಲಿದೆ.

- Advertisement -

Latest News

error: Content is protected !!