- Advertisement -
- Advertisement -
ಬೆಳ್ತಂಗಡಿ : ಬಂಟ್ವಾಳ ಉಪ-ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ ಸಂತೋಷ್ ಕುಮಾರ್ ಅವರನ್ನು ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸಪ್ಟೆಂಬರ್ 6 ರಂದು ಆದೇಶ ಹೊರಡಿಸಿದೆ.
ಸೌಮ್ಯಲತಾ ಈ ಹಿಂದೆ ಬೆಳ್ತಂಗಡಿಯಲ್ಲಿ ಅಬಕಾರಿ
ನಿರೀಕ್ಷಕರಾಗಿ ಕರ್ತವ್ಯದಲ್ಲಿದ್ದ ಸಮಯದಲ್ಲಿ ಅಬಕಾರಿ ಅಕ್ರಮಗಳಿಗೆ ಕಡಿವಾಣ ಹಾಕುವಲ್ಲಿ ಮುತುವರ್ಜಿ ವಹಿಸಿದ್ದು, ಇಲಾಖೆಯಲ್ಲಿ ಖಡಕ್ ಅಧಿಕಾರಿ ಎಂದು ಹೆಸರು ಪಡೆದಿರುವ ಇವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ವರ್ಗಾವಣೆ ಗೊಂಡಿರುವುದರಿಂದ ಬೆಳ್ತಂಗಡಿ ತಾಲೂಕಿನ ಅಕ್ರಮ ಮದ್ಯ ಮಾರಾಟಗಾರರ ಎದೆಯಲ್ಲಿ ನಡುಕ ಹುಟ್ಟಿರುವುದಂತೂ ಸತ್ಯ.
ಇನ್ನು ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ಬಂಟ್ವಾಳಕ್ಕೆ ವರ್ಗಾವಣೆ ಮಾಡಲಾಗಿದೆ.
- Advertisement -