Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ಇಂದು ಸುಮಲತಾ ಅಂಬರೀಶ್ ಚುನಾವಣಾ ಪ್ರಚಾರ

ಉಡುಪಿಯಲ್ಲಿ ಇಂದು ಸುಮಲತಾ ಅಂಬರೀಶ್ ಚುನಾವಣಾ ಪ್ರಚಾರ

- Advertisement -
- Advertisement -

ಉಡುಪಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.ಉಡುಪಿಯಲ್ಲಿ ಇಂದು ನಡೆಯಲಿರುವ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಸುಮಲತಾ ಅಂಬರೀಶ್ ಪಾಲ್ಗೊಳ್ಳಲಿದ್ದಾರೆ.

ಉಪ್ಪೂರಿನಲ್ಲಿರುವ ರಾಮಕ್ಷತ್ರೀಯ ಸಭಾಭವನದಲ್ಲಿ ಬೆಳಗ್ಗೆ 11.30 ಕ್ಕೆ ಮಹಿಳಾ ಸಮಾವೇಶ ನಡೆಯಲಿದೆ.ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಲಿರುವ ಸುಮಲತಾ ಸಮಾವೇಶದಲ್ಲಿ ಭಾಗವಹಿಸಿ‌ ನಂತರ ಮಧ್ಯಾಹ್ನ‌ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಕೂಡಾ ಇಂದು ಬಿಜೆಪಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!