- Advertisement -
![]()
- Advertisement -
ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು, ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಪುತ್ತೂರು, ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಸಹಯೋಗದಲ್ಲಿ ಇಂದಿನಿಂದ ಎಪ್ರಿಲ್ 24ರ ತನಕ ಪರ್ಲಡ್ಕದ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ಮಕ್ಕಳ ಬೇಸಿಗೆ ಶಿಬಿರ ‘ಬಣ್ಣಭಾವ’ ನಡೆಯಲಿದೆ.
ಸಹಾಯಕ ಆಯುಕ್ತ ಗಿರೀಶ್ ನಂದನ್ ಶಿಬಿರ ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮಕ್ಕಳಿಗೆ ಬಣ್ಣ ಹಂಚಲಿದ್ದಾರೆ.ಸ್ಥಳೀಯ ನಗರಸಭಾ ಸದಸ್ಯೆ ದೀಕ್ಷಾ ಪೈ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಏ.24ರಂದು ಸಂಜೆ ಶಿಬಿರಾರ್ಥಿಗಳ ಕಲಿಕಾ ಪ್ರದರ್ಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ.
- Advertisement -


