Wednesday, June 24, 2026
Homeತಾಜಾ ಸುದ್ದಿನಟ ಚೇತನ್‌ಗೆ ಮತ್ತೆ ಸಂಕಷ್ಟ: ಬ್ರಾಹ್ಮಣರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಮನ್ಸ್‌ ಜಾರಿ

ನಟ ಚೇತನ್‌ಗೆ ಮತ್ತೆ ಸಂಕಷ್ಟ: ಬ್ರಾಹ್ಮಣರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಸಮನ್ಸ್‌ ಜಾರಿ

- Advertisement -
- Advertisement -

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಕೆಲ ತಿಂಗಳ ಹಿಂದೆಯಷ್ಟೇ ನ್ಯಾಯಾಂಗ ಬಂಧನ ಅನುಭವಿಸಿದ್ದರು. ಇದೀಗ ನಟ ಚೇತನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ನೀಡಿದ್ದ ನಟ ಚೇತನ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಮೇ 31 ರಂದು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ಸೂಚಿಸಲಾಗಿದೆ. ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ ಸಮನ್ಸ್ ಜಾರಿಯಾಗುತ್ತಿರುವುದು ಇದು ಎರಡನೇ ಬಾರಿ.

ಬ್ರಾಹ್ಮಣರ ಬಗ್ಗೆ ನಟ ಚೇತನ್ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಆಯುಕ್ತರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ದೂರು ನೀಡಿದ್ದರು. ಹಾಗೇ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್ ವಿರುದ್ಧ ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಎಂಬುವರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಧಾರ್ಮಿಕ ಭಾವನೆ ಕೆರಳಿಸುವುದು ಐಪಿಸಿ 295(ಎ), ದ್ವೇಷ ಭಾವನೆ ಹೆಚ್ಚಿಸುವುದು ಐಪಿಸಿ 153(ಬಿ) ಆರೋಪದಡಿಯಲ್ಲಿ ನಟ ಚೇತನ್ ವಿರುದ್ಧ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ಈ ಹಿಂದೆಯೂ ಸಮನ್ಸ್ ನೀಡಲಾಗಿತ್ತು. ಇದೀಗ ಎರಡನೇ ಬಾರಿ ಸಮನ್ಸ್ ಜಾರಿ ಮಾಡಲಾಗಿದೆ

- Advertisement -

Latest News

error: Content is protected !!