Thursday, May 2, 2024
Homeತಾಜಾ ಸುದ್ದಿಡಿಕೆಶಿ, ಸಿದ್ದರಾಮಯ್ಯಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್

ಡಿಕೆಶಿ, ಸಿದ್ದರಾಮಯ್ಯಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್

spot_img
- Advertisement -
- Advertisement -

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ಮೇ 24ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ.

ಕಳೆದ ಜನವರಿಯಲ್ಲಿ ಮೇಕೆದಾಟು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದರಿಂದ ಕೋವಿಡ್ ನಿಯಮಾವಳಿಗಳನ್ನು ಜಾರಿ ಮಾಡಲಾಗಿತ್ತು. ಇದನ್ನು ಉಲ್ಲಂಘಿಸಿ ಸಾವಿರಾರು ಜನರನ್ನು ಒಂದೆಡೆ ಸೇರಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ವಿಪತ್ತು ನಿರ್ವಹಣಾ ಕಾಯ್ದೆ 2005ರ ಐಪಿಸಿ ಸೆಕ್ಷನ್ 141, 143, 290 336ರ ಅಡಿಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!