Friday, June 5, 2026
Homeಕರಾವಳಿಮಂಗಳೂರುಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ನಿಧನ

- Advertisement -
- Advertisement -

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು  ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.  ಪೆರುವಾಜೆ ಗ್ರಾಮದ ಕಾನಾವು ನಿವಾಸಿಯಾಗಿರುವ ಸುಂದರ ಕಾನಾವು ಅವರಿಗೆ ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಆಗಿತ್ತು. ಹಾಗಾಗಿ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.

- Advertisement -

Latest News

error: Content is protected !!