Wednesday, May 22, 2024
Homeತಾಜಾ ಸುದ್ದಿಮುಂದಿನ ವಾರದಿಂದ ರಾಜ್ಯ ವ್ಯಾಪಿ ಭಾನುವಾರ ಸಂಪೂರ್ಣ ಲಾಕ್ ಡೌನ್, ಇನ್ಮುಂದೆ ವಾರದಲ್ಲಿ ಐದು ದಿನ...

ಮುಂದಿನ ವಾರದಿಂದ ರಾಜ್ಯ ವ್ಯಾಪಿ ಭಾನುವಾರ ಸಂಪೂರ್ಣ ಲಾಕ್ ಡೌನ್, ಇನ್ಮುಂದೆ ವಾರದಲ್ಲಿ ಐದು ದಿನ ಮಾತ್ರ ಕೆಲಸ

spot_img
- Advertisement -
- Advertisement -

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೌದು, ಜು.5ರಿಂದ ರಾಜ್ಯ ವ್ಯಾಪಿ ಭಾನುವಾರ ಬೆಳಿಗ್ಗೆ 8 ರಿಂದ ಬೆಳಿಗ್ಗೆ 5ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಲಾಕ್ ಡೌನ್ ಬದಲಾಗಿ ವೀಕೆಂಡ್ ಸಂಪೂರ್ಣ ಬಂದ್ ಮಾಡಲಾಗುವುದು. ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡುವ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಐದು ದಿನ ಮಾತ್ರ ಕೆಲಸ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬಹುದು. ಹೌದು, ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಭಾಗ್ಯ ಸಿಗಲಿದೆ.

ಹೌದು, ಕೊರೊನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದ್ದು. ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ನೀಡಿದೆ. ಪ್ರತಿ ಶನಿವಾರ ಹಾಗೂ ಭಾನುವಾರ ಕೆಲಸದ ಹೊರೆಯಿಂದ ನೌಕರರಿಗೆ ರಿಲೀಫ್ ಸಿಕ್ಕಿದೆ. ಸದ್ಯ ಸರ್ಕಾರದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

- Advertisement -
spot_img

Latest News

error: Content is protected !!