Wednesday, June 24, 2026
Homeಕರಾವಳಿಮಂಗಳೂರುಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ದಿ. ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ...

ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ದಿ. ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್‌ ಇಂದು ಪ್ರಮಾಣವಚನ ಸ್ವೀಕರಿಸಿದರು.

ಸುನೇತ್ರಾ ಪವಾರ್ ಮೊನ್ನೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟ ಎನ್ ಸಿಪಿ ನಾಯಕ ಅಜಿತ್‌ ಪವಾರ್‌ ಅವರ ಪತ್ನಿಯಾಗಿದ್ದಾರೆ.

ಮುಂಬೈನಲ್ಲಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ದೇವವೃತ ಆಚಾರ್ಯ ಅವರಿಂದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಎನ್‌ಸಿಪಿಯ ಹಿರಿಯ ನಾಯಕರಾದ ಛಗನ್‌ ಭುಜಬಲ್‌, ಪ್ರಫುಲ್‌ ಪಟೇಲ್‌, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಮತ್ತು ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!