Wednesday, April 16, 2025
Homeತಾಜಾ ಸುದ್ದಿಸರ್ಕಾರಿ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸುನೀಲ್ ಬೋಸ್; ಸಂಸದನ ನಡೆ ಬಗ್ಗೆ ಚುನಾವಣಾ...

ಸರ್ಕಾರಿ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸುನೀಲ್ ಬೋಸ್; ಸಂಸದನ ನಡೆ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು..!

spot_img
- Advertisement -
- Advertisement -

ಮೈಸೂರು: ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ನಡೆ ಸದ್ಯ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸುನೀಲ್ ಬೋಸ್ ನಿನ್ನೆ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ.

ಸಂಸದ ಸುನೀಲ್ ಬೋಸ್ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜೊತೆಯಾಗಿ ಆಷಾಡ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಬಂದಿದ್ದರು. ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದು  ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸರ್ಕಾರಿ ಅಧಿಕಾರಿ ಸವಿತಾ ಹಣೆಗೆ ಕುಂಕುಮ ಇಟ್ಟಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇನ್ನು ಈ ಸಲದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಇದೀಗ ಸುನೀಲ್‌ಬೋಸ್ ನಡೆ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ.

- Advertisement -
spot_img

Latest News

error: Content is protected !!