Tuesday, June 9, 2026
Homeತಾಜಾ ಸುದ್ದಿಸಿಎಂ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಲಾಗಿದೆ.‌

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದು, ಸಂಪುಟ ದರ್ಜೆ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.

ಸುನೀಲ್ ಕನುಗೋಳು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯ ಚುನಾವಣಾ ತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದರು.

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತಂಡದಲ್ಲಿ ಕಾರ್ಯ‌ ನಿರ್ವಹಿಸಿದ‌ ಅನುಭವ ಹೊಂದಿರುವ ಸುನೀಲ್ ಕನುಗೋಳು, ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದ ವಿಪಕ್ಷವಾಗಿದ್ದ ಕಾಂಗ್ರೆಸ್ ಪಕ್ಷ ನಡೆಸಿದ್ದ ಪೇ ಸಿಎಂ ಕ್ಯಾಂಪೇನ್ ನ ಮಾಸ್ಟರ್ ಮೈಂಡ್ ಆಗಿದ್ದರು.

- Advertisement -

Latest News

error: Content is protected !!