Friday, June 5, 2026
Homeಕರಾವಳಿಉಡುಪಿವಿಧಾನ ಪರಿಷತ್ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಸುನೀಲ್ ಕುಮಾರ್ ನೇಮಕ

ವಿಧಾನ ಪರಿಷತ್ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಸುನೀಲ್ ಕುಮಾರ್ ನೇಮಕ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರನ್ನು ಉಸ್ತುವಾರಿಯನ್ನಾಗಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಎಲ್ಲಾ ಆರು ಕ್ಷೇತ್ರಗಳಿಗೂ ಪಕ್ಷದ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೆಂದ್ರ ಆದೇಶ ಹೊರಡಿಸಿದ್ದಾರೆ.

ಜೂನ್ 3 ರಂದು ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಾಗಿ ಡಾ. ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡ ಕಣದಲ್ಲಿದ್ದಾರೆ.

- Advertisement -

Latest News

error: Content is protected !!