Thursday, June 4, 2026
Homeತಾಜಾ ಸುದ್ದಿಬಿಜೆಪಿ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾಗಿ ಸುನೀಲ್ ಕುಮಾರ್

ಬಿಜೆಪಿ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾಗಿ ಸುನೀಲ್ ಕುಮಾರ್

- Advertisement -
- Advertisement -

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ನೇಮಕಗೊಂಡಿದ್ದಾರೆ.

ಸುನೀಲ್ ಕುಮಾರ್ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಸುನೀಲ್ ಕುಮಾರ್ ಜೊತೆಗೆ ಇಬ್ಬರು ಸಹ-ಸಂಚಾಲಕರನ್ನು ಕೂಡಾ ನೇಮಕ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರ ಪ್ರವಾಸ, ಚುನಾವಣಾ ಪ್ರಚಾರ ಸಭೆಗಳು, ರೋಡ್ ಶೋ ಗಳು ಸೇರಿದಂತೆ ಪಕ್ಷದ ಇಡೀ ಪ್ರಚಾರದ ರೂಪುರೇಷೆಗಳನ್ನು ಚುನಾವಣಾ ನಿರ್ವಹಣಾ ಸಮಿತಿ ನಿರ್ವಹಿಸಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.

- Advertisement -

Latest News

error: Content is protected !!