Thursday, June 4, 2026
Homeಕರಾವಳಿಉಡುಪಿಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ; ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯ

ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ; ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯ

- Advertisement -
- Advertisement -

ಉಡುಪಿ: ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚಾಗಿ ಖಾಸಗಿ ಬಸ್​ಗಳನ್ನು ಅವಲಂಬಿಸಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಒತ್ತಾಯಿಸಿದ ಸುನಿಲ್ ಕುಮಾರ್, ‘ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು’ ಎಂದಿದ್ದಾರೆ.

- Advertisement -

Latest News

error: Content is protected !!