Thursday, June 4, 2026
Homeಕರಾವಳಿಉಡುಪಿಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಬಗ್ಗೆ ಸಚಿವ ಸುನೀಲ್ ಕುಮಾರ್ ಹೇಳಿದ್ದೇನು?

ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಬಗ್ಗೆ ಸಚಿವ ಸುನೀಲ್ ಕುಮಾರ್ ಹೇಳಿದ್ದೇನು?

- Advertisement -
- Advertisement -

ಉತ್ತರಕನ್ನಡ; ಕಾರ್ಕಳದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಾತನಾಡಿದ ಅವರು ಯಾರು ಬೇಕಾದ್ರೂ ಸ್ಪರ್ಧೆ ಮಾಡಬಹುದು, ಎಲ್ಲರೂ ಸ್ವತಂತ್ರರು. ನಮ್ಮ ಪಕ್ಷದ ನಿಲುವು ಹೇಗಿರ್ಬೇಕು ಅನ್ನೋದನ್ನ ಬೆರೆಯವರು ನಮಗೆ ಹೇಳೋ ಅಗತ್ಯತೆ ಇಲ್ಲ ಎಂದಿದ್ದಾರೆ.

ಪ್ರಮೋದ್ ಮುತಾಲಿಕ್ ಸ್ಪರ್ಧೆಯನ್ನ ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಸ್ಪರ್ಧೆಗಳು ಇರಬೇಕು. ಅಂತಿಮವಾಗಿ ಮತದಾರ ತನ್ನ ನಿರ್ಣಯ ಮಾಡ್ತಾನೆ ಎಂದ ಅವರು ಕಾರ್ಕಳ ಕ್ಷೇತ್ರದಲ್ಲಿ ಯಾರಿಗೆ ಮತದಾನ ಮಾಡಬೇಕು ಅಂತ ಪ್ರಜ್ಞಾವಂತ ಮತದಾರರು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!