Thursday, June 4, 2026
Homeತಾಜಾ ಸುದ್ದಿರಘುಪತಿ ಭಟ್ ಪಕ್ಷದ ವಿರುದ್ಧ ಸ್ಫರ್ಧಿಸುವಷ್ಟು ಮುಂದೆ ಹೋಗುವುದಿಲ್ಲ; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ವಿಶ್ವಾಸ

ರಘುಪತಿ ಭಟ್ ಪಕ್ಷದ ವಿರುದ್ಧ ಸ್ಫರ್ಧಿಸುವಷ್ಟು ಮುಂದೆ ಹೋಗುವುದಿಲ್ಲ; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ವಿಶ್ವಾಸ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ಧ ಸ್ಫರ್ಧೆ ಮಾಡುವಷ್ಟರ ಮಟ್ಟಿಗೆ ಮುಂದೆ ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ನೈಋತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಅಸಮಾಧಾನಗೊಂಡಿರುವುದು ನಿಜ ಎಂದು ಹೇಳಿದ್ದಾರೆ.ನಾನೇ ಸ್ವತಃ ರಘುಪತಿ ಭಟ್ ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದ್ದೇನೆ ಎಂದೂ ಸುನೀಲ್ ಕುಮಾರ್ ಹೇಳಿದ್ದಾರೆ.

ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ನಾಮಪತ್ರ ಸಲ್ಲಿಸುವುದಾಗಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಈಗಾಗಲೇ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!