Wednesday, June 24, 2026
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ  ಸಚಿವ ವಿ.ಸುನಿಲ್ ಕುಮಾರ್ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ  ಸಚಿವ ವಿ.ಸುನಿಲ್ ಕುಮಾರ್ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ:  ಸಚಿವ ವಿ.ಸುನಿಲ್ ಕುಮಾರ್ ಅವರು ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ವತಿಯಿಂದ ಸುನಿಲ್ ಕುಮಾರ್ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಮನೋಜ್ ಕುಮಾರ್, ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿಗಳು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಬಳಿಕ ಸುನಿಲ್ ಕುಮಾರ್ ಸುಬ್ರಹ್ಮಣ್ಯ ಸಮೀಪದ ದೇವರಗದ್ದೆ ಸ್ವಾಮಿ ಕೊರಗಜ್ಜ ದೈವದ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.

- Advertisement -

Latest News

error: Content is protected !!