Monday, July 1, 2024
Homeಕರಾವಳಿನೈಋತ್ಯ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ; ಬಿಜೆಪಿ ರಾಜ್ಯ...

ನೈಋತ್ಯ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮನವೊಲಿಕೆ ಯತ್ನ

spot_img
- Advertisement -
- Advertisement -

ಉಡುಪಿ: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡಿರುವ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ನಿವಾಸಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲೆಯ ಡಾ. ಧನಂಜಯ ಸರ್ಜಿ ಹೆಸರು ಘೋಷಣೆ ಆಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದ ಮೂಲಕ ರಘುಪತಿ ಭಟ್ ಅಸಮಾಧಾನ ಹೊರ ಹಾಕಿದ್ದರು.

ರಘುಪತಿ ಭಟ್ ಅಸಮಾಧಾನದ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ಉಡುಪಿಯಲ್ಲಿರುವ ರಘುಪತಿ ಭಟ್ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

ರಘುಪತಿ ಭಟ್ ಅಸಮಾಧಾನವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಸುನೀಲ್ ಕುಮಾರ್ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ.

ಸುನೀಲ್ ಕುಮಾರ್ ಮನವೊಲಿಕೆಯ ಪ್ರಯತ್ನದ ಬಳಿಕವೂ ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ರಘುಪತಿ ಭಟ್ ಘೋಷಣೆ ಮಾಡಿದ್ದಾರೆ

- Advertisement -
spot_img

Latest News

error: Content is protected !!