Wednesday, June 24, 2026
Homeಕರಾವಳಿಉಡುಪಿಸಂಸ್ಕ್ರತಿ ಇಲ್ಲದವರು ಸಂಸ್ಕ್ರತಿ  ಬಗ್ಗೆ ಮಾತನಾಡಬಾರದು: ನಟ ಚೇತನ್ ಹೇಳಿಕೆಗೆ ಸಚಿವ ಸುನೀಲ್ ಕುಮಾರ್ ತಿರುಗೇಟು

ಸಂಸ್ಕ್ರತಿ ಇಲ್ಲದವರು ಸಂಸ್ಕ್ರತಿ  ಬಗ್ಗೆ ಮಾತನಾಡಬಾರದು: ನಟ ಚೇತನ್ ಹೇಳಿಕೆಗೆ ಸಚಿವ ಸುನೀಲ್ ಕುಮಾರ್ ತಿರುಗೇಟು

- Advertisement -
- Advertisement -

ಬೆಂಗಳೂರು; ಭೂತ ಕೋಲ ಹಿಂದೂ ಸಂಸ್ಕೃತಿ ಅಲ್ಲ ಎಂಬ ನಟ ಚೇತನ್ ಹೇಳಿಕೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವ ಸುನೀಲ್ ಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ  ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್ ಸಂಸ್ಕ್ರತಿ ಇಲ್ಲದವರು ಸಂಸ್ಕ್ರತಿ  ಬಗ್ಗೆ ಮಾತನಾಡಬಾರದು. ದೈವ ನರ್ತನ ಹಿಂದೂ ಸಂಸ್ಕ್ರತಿಯ ಭಾಗ. ಇದು ನಮ್ಮ ಸಂಸ್ಕ್ರತಿಯ ಭಾಗ. ಇದನ್ನು ಮತ್ತಷ್ಟು ಗಟ್ಟಿ ಮಾಡುತ್ತೇವೆ ಎಂದಿದ್ದಾರೆ.

ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬ. ಯಾರೋ ಒಬ್ಬ ವ್ಯಕ್ತಿ ಹಾಗೆ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲ್ಲ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಗಟ್ಟಿಯಾದ ಭಾಗವಾಗಿದೆ ಎಂದು ಚೇತನ್ ಗೆ ತಿರುಗೇಟು ನೀಡಿದ್ದಾರೆ.

- Advertisement -

Latest News

error: Content is protected !!