Wednesday, June 3, 2026
Homeಕರಾವಳಿಉಡುಪಿಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುನೀಲ್ ಕುಮಾರ್ ಮತ್ತು‌ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾ. ಬ್ರಿಜೇಶ್ ಚೌಟ...

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುನೀಲ್ ಕುಮಾರ್ ಮತ್ತು‌ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾ. ಬ್ರಿಜೇಶ್ ಚೌಟ ನೇಮಕ

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳ ಶಾಸಕ ಮತ್ತು ಮಾಜಿ ಸಚಿವ ವಿ. ಸುನೀಲ್ ಕುಮಾರ್ ನೇಮಕಗೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಧಾ‌ನಸಭೆ ವಿಪಕ್ಷ ನಾಯಕನ‌ ಸ್ಥಾನದ ರೇಸ್ ನಲ್ಲಿದ್ದ ಸುನೀಲ್ ಕುಮಾರ್ ಗೆ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಸ್ಥಾ‌ನ ನೀಡಲಾಗಿದೆ.ಇನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇಮಕಗೊಂಡಿದ್ದಾರೆ.

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಖಜಾಂಚಿ, ರಾಜ್ಯ ಕಾರ್ಯದರ್ಶಿಗಳು ಮತ್ತು ಆರು ಮೋರ್ಛಾಗಳ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗಿದೆ.

- Advertisement -

Latest News

error: Content is protected !!