Wednesday, June 24, 2026
Homeತಾಜಾ ಸುದ್ದಿಬರೋಬ್ಬರಿ 9 ತಿಂಗಳ ಬಳಿಕ ಭೂಮಿಗೆ ಬಂದಿಳಿದ ಬಾಹ್ಯಾಕಾಶದ ಬೆರಗಿನ ಹಕ್ಕಿ ಸುನೀತಾ ವಿಲಿಯಮ್ಸ್

ಬರೋಬ್ಬರಿ 9 ತಿಂಗಳ ಬಳಿಕ ಭೂಮಿಗೆ ಬಂದಿಳಿದ ಬಾಹ್ಯಾಕಾಶದ ಬೆರಗಿನ ಹಕ್ಕಿ ಸುನೀತಾ ವಿಲಿಯಮ್ಸ್

- Advertisement -
- Advertisement -

ವಾಷಿಂಗ್ ಟನ್; ಬರೋಬ್ಬರಿ 9 ತಿಂಗಳ ಬಳಿಕ ಬಾಹ್ಯಾಕಾಶದ ಬೆರಗಿನ ಹಕ್ಕಿ ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ.

9 ತಿಂಗಳಿಂದ ಬಾಹ್ಯಾಕಾಶ ನಿಲ್ದಾಣ(ಐಎಸ್ಎಸ್)ದಲ್ಲಿ ಸಿಕ್ಕಿಹಾಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭಾರತೀಯ ಕಾಲಮಾನ ಬುಧವಾರ ಮುಂಜಾನೆ 3.27ಕ್ಕೆ ಫ್ಲಾರಿಡಾದ ಕಡಲ ತೀರಕ್ಕೆ ಬಂದಿಳಿದಿದ್ದಾರೆ..

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು. ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಲ್ಲಿಗೆ ಪ್ರಯಾಣಿಸಿದ್ದರು. ಆದರೆ, ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು. ಇದೀಗ ಅವರು ಸುರಕ್ಷಿತವಾಗಿ ವಾಪಾಸ್ಸಾಗಿದ್ದಾರೆ.

- Advertisement -

Latest News

error: Content is protected !!