Thursday, June 4, 2026
Homeತಾಜಾ ಸುದ್ದಿಶಿಕ್ಷಕರ ನೇಮಕಾತಿ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ: ರಾಜ್ಯ ಶಿಕ್ಷಣ...

ಶಿಕ್ಷಕರ ನೇಮಕಾತಿ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಅಶ್ಲೀಲ ಫೋಟೋ: ರಾಜ್ಯ ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

- Advertisement -
- Advertisement -

ಬೆಂಗಳೂರು; ರಾಜ್ಯ ಶಿಕ್ಷಕರ ನೇಮಕಾತಿ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್  ಅಶ್ಲೀಲ ಚಿತ್ರವಿರುವ ಹಾಲ್ ಟಿಕೆಟ್ ನ್ನು ಶಿಕ್ಷಕಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು ಈ ಹಾಲ್ ಟಿಕೆಟ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೇ ರಾಜ್ಯ ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ನೇಮಕಾತಿಯ ಪ್ರವೇಶಾತಿ ಪತ್ರದಲ್ಲಿ ಅಭ್ಯರ್ಥಿಯ ಬದಲು ಸನ್ನಿ ಅಶ್ಲೀಲ ಫೋಟೋ ಪ್ರಕಟಿಸಲಾಗಿದೆ. ಸದನದಲ್ಲಿ ನೀಲಿಚಿತ್ರ ವೀಕ್ಷಿಸುವ ಪಕ್ಷದವರಿಂದ ಇನ್ನೇನು ತಾನೇ ನಿರೀಕ್ಷಿಸಲು ಸಾಧ್ಯ? @BCNagesh_bjp ಅವರೇ, ನೀಲಿಚಿತ್ರ ತಾರೆ ನೋಡುವ ಹಂಬಲವಿದ್ದರೆ ಒಂದು ಫೋಟೋ ನೇತಾಕಿಕೊಳ್ಳಿ, ಅದಕ್ಕೆ ಶಿಕ್ಷಣ ಇಲಾಖೆಯನ್ನು ಉಪಯೋಗಿಸಬೇಡಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಣ ಸಚಿವರನ್ನು ಹಾಗೂ ಶಿಕ್ಷಣ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಇದು ನಿಜವಾಗಿಯೂ ನಡೆದ ಘಟನೆಯೋ ಇಲ್ಲ ಹಾಲ್ ಟಿಕೆಟ್ ನ್ಜು ಈ ರೀತಿ ಎಡಿಟ್ ಮಾಡಲಾಗಿದ್ಯೋ ಎಂಬ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!