Thursday, June 25, 2026
Homeಕರಾವಳಿಮಂಗಳೂರುವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ಕಟ್ಟಡ ಲೋಕಾರ್ಪಣೆ

ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ಕಟ್ಟಡ ಲೋಕಾರ್ಪಣೆ

- Advertisement -
- Advertisement -

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಸರ್ಜಿಕಲ್ ಸ್ಪೆಷಾಲಿಟಿ ನೂತನ ಕಟ್ಟಡ ಲೋಕಾರ್ಪಣೆಗೊಂಡಿದೆ.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು.

250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಜಿಕಲ್ ನೂತನ ಕಟ್ಟಡವನ್ನು 53 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣಗಳನ್ನು ಅಳವಡಿಸಲಾಗಿದೆ.17 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಕೂಡಾ ವೆನ್ಲಾಕ್ ಆಸ್ಪತ್ರೆಗೆ ಮಂಜೂರು ಮಾಡಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ.

ಆಸ್ಪತ್ರೆಯ ನೂತನ ಸರ್ಜಿಕಲ್ ಬ್ಲಾಕ್ ಒಟ್ಟು 7 ಅಂತಸ್ತುಗಳನ್ನು ಕಟ್ಟಡವು ಹೊಂದಿದ್ದು, 250 ಹಾಸಿಗೆಗಳ ಸೌಲಭ್ಯ ಹೊಂದಿದೆ. ಕಟ್ಟಡದ ತಳ ಅಂತಸ್ತಿನಲ್ಲಿ ಕ್ಯಾಥ್‌ಲ್ಯಾಬ್ ಮತ್ತು ರೇಡಿಯೋಲಜಿ ವಿಭಾಗಗಳಿವೆ. ನೆಲ ಅಂತಸ್ತಿನಲ್ಲಿ 15 ಹಾಸಿಗೆಗಳ ತುರ್ತು ಚಿಕಿತ್ಸಾ ವಿಭಾಗ, 8 ಹಾಸಿಗೆಗಳ ತುರ್ತು ಚಿಕಿತ್ಸಾ ಐಸಿಯು, ಎಂಡೋಸ್ಕೋಪಿ ಮತ್ತು ತುರ್ತು ಶಸ್ತ್ರಚಿಕಿತ್ಸಾ ಕೊಠಡಿಗಳಿವೆ.

ಒಂದನೇ ಮಹಡಿಯಲ್ಲಿ 60 ಹಾಸಿಗೆಗಳ ಇಎನ್ ಟಿ. ಮತ್ತು ಯುರಾಲಜಿ ಶಸ್ತ್ರಚಿಕಿತ್ಸಾ ವಾರ್ಡ್‌ಗಳು ಮತ್ತು ಎರಡನೇ ಮಹಡಿಯಲ್ಲಿ 70 ಹಾಸಿಗೆಗಳ ನ್ಯೂರೋ ಸರ್ಜರಿ, ಕಾರ್ಡಿಯೋಥೈರಾಸಿಕ್ ಸರ್ಜರಿ ಮತ್ತು ಕಣ್ಣಿನ ಶಸ್ತ್ರಚಿಕಿತ್ಸಾ ವಾರ್ಡ್‌ ಗಳಿವೆ. ಮೂರು ಮತ್ತು ನಾಲ್ಕನೇ ಅಂತಸ್ತಿನಲ್ಲಿ, ಪ್ರತಿ ಅಂತಸ್ತಿನಲ್ಲಿ 5 ರಂತೆ ಒಟ್ಟು 10 ಸುಸಜ್ಜಿತವಾದ ಶಸ್ತ್ರಚಿಕಿತ್ಸಾ ಕೊಠಡಿಗಳಿವೆ ಮತ್ತು ತಲಾ 10 ಹಾಸಿಗೆಗಳ ಶಸ್ತ್ರಚಿಕಿತ್ಸಾ ಪೂರ್ವ ಮತ್ತು 15 ಹಾಸಿಗೆಗಳ ಶಸ್ತ್ರಚಿಕಿತ್ಸಾ ನಂತರದ ವಾರ್ಡ್ ಲಭ್ಯವಿದೆ.

ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕಟ್ಟಡಕ್ಕೆ ಮಂಗಳೂರು ಸ್ಮಾರ್ಟ್‌ ಸಿಟಿ ವತಿಯಿಂದ 7 ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಒದಗಿಸಲಾಗಿದ್ದು, ಸರಕಾರದ ವತಿಯಿಂದ 2 ಕೋಟಿ ರೂಪಾಯಿ ಮತ್ತು ಕೆಎಂಸಿ ವತಿಯಿಂದ 4 ಕೋಟಿ ರೂಪಾಯಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗಿದೆ.

- Advertisement -

Latest News

error: Content is protected !!