Saturday, May 18, 2024
Homeತಾಜಾ ಸುದ್ದಿನಟ ರಜಿನಿಕಾಂತ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ನಟ ರಜಿನಿಕಾಂತ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪೋಲೋ ಆಸ್ಪತ್ರೆಯ ಮೂಲಗಳ ಪ್ರಕಾರ, ಇಂದು ಬೆಳಗ್ಗೆ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಹೈದರಾಬಾದ್ ನಲ್ಲಿ ಸಿನಿಮಾ ವೊಂದರ ಶೂಟಿಂಗ್ ನಲ್ಲಿದ್ದಾರೆ. ಸೆಟ್ ನಲ್ಲಿದ್ದ ಒಂದೆರಡು ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಡಿಸೆಂಬರ್ 22ರಂದು ಕೋವಿಡ್-19 ಗಾಗಿ ರಜನಿಕಾಂತ್ ಅವರನ್ನು ಪರೀಕ್ಷಿಸಲಾಗಿತ್ತು. ರಜನಿಕಾಂತ್ ಅವರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ತಿಳಿಸಿದೆ.

ಕರೋನಾ ನೆಗೆಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದರೂ, ಅಂದಿನಿಂದ ಅವರು ಪ್ರತ್ಯೇಕಗೊಂಡು, ಸೂಕ್ಷ್ಮವಾಗಿ ನಿಗಾ ವಹಿಸುತ್ತಿದ್ದಾರೆ. ಅವರಿಗೆ ಕೋವಿಡ್-19 ರ ಯಾವುದೇ ಲಕ್ಷಣಗಳು ಇರಲಿಲ್ಲವಾದರೂ, ಅವರ ರಕ್ತದೊತ್ತಡದಲ್ಲಿ ತೀವ್ರವಾದ ಏರಿಳಿತಗಳು ಕಂಡುಬಂದಿವೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಅದಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.

ಡಿಸ್ಚಾರ್ಜ್ ಆಗುವ ಮುನ್ನ ಅವರ ರಕ್ತದೊತ್ತಡ ಕಡಿಮೆಯಾಗುವವರೆಗೂ ಅವರನ್ನು ಆಸ್ಪತ್ರೆಯಲ್ಲಿಯೇ ತಪಾಸಣೆ ಗೊಳಪಡಿಸಲಾಗುತ್ತದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡದಲ್ಲಿ ಏರುಪೇರು ಮತ್ತು ಆಯಾಸದ ಹೊರತಾಗಿ ಅವರಿಗೆ ಬೇರೆ ಯಾವುದೇ ರೋಗಲಕ್ಷಣಗಳಿರುವುದಿಲ್ಲ. ಹಿಮೋಡೈನಮಿಕ್ ಆಗಿ ಸ್ಥಿರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..

- Advertisement -
spot_img

Latest News

error: Content is protected !!