Saturday, June 6, 2026
Homeತಾಜಾ ಸುದ್ದಿದೇವಸ್ಥಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ದಾಂಧಲೆ: ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್‌

ದೇವಸ್ಥಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ದಾಂಧಲೆ: ಸೋಶಿಯಲ್‌ ಮೀಡಿಯಾದಲ್ಲಿ ವೀಡಿಯೋ ವೈರಲ್‌

- Advertisement -
- Advertisement -

ಭೋಪಾಲ್: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಭೇಟಿ ವೇಳೆ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಬೆಂಬಲಿಗರು ಬ್ಯಾರಿಕೇಡ್ ಮುರಿದು ದೇವಸ್ಥಾನದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶ್ರಾವಣ ಮಾಸದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ತೇಜಸ್ವಿ ಸೂರ್ಯ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಆದರೆ, ಅವರ ಬೆಂಬಲಿಗರಿಗೆ ಪ್ರವೇಶ ನಿರಾಕರಿಸಿದ್ದರಿಂದ ಗಲಾಟೆ ಉಂಟಾಯಿತು ಎನ್ನಲಾಗಿದೆ.

ತಮಗೆ ದೇವಸ್ಥಾನದೊಳಗೆ ಪ್ರವೇಶ ನೀಡಬೇಕೆಂದು ರೊಚ್ಚಿಗೆದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದೇವಸ್ಥಾನದ ಬ್ಯಾರಿಕೇಡ್​​ಗಳನ್ನು ಬೀಳಿಸಿ, ಒಳಗೆ ನುಗ್ಗಿದ್ದು, ಸೆಕ್ಯುರಿಟಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲದೆ ಅರ್ಚಕರನ್ನೂ ತಳ್ಳಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

- Advertisement -

Latest News

error: Content is protected !!