Monday, May 20, 2024
Homeತಾಜಾ ಸುದ್ದಿ2002ರ ಗುಜರಾತ್‌ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರ ಇಲ್ಲ: ಪ್ರಧಾನಿಗೆ ಸುಪ್ರೀಂ ಕೋರ್ಟ್‌ ಕ್ಲೀನ್‌ ಚಿಟ್‌

2002ರ ಗುಜರಾತ್‌ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರ ಇಲ್ಲ: ಪ್ರಧಾನಿಗೆ ಸುಪ್ರೀಂ ಕೋರ್ಟ್‌ ಕ್ಲೀನ್‌ ಚಿಟ್‌

spot_img
- Advertisement -
- Advertisement -

ಸಾವಿರಾರು ಮಂದಿಯ ಸಾವು ಹಾಗೂ ಅಪಾರ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದ್ದ 2002 ರ ಗುಜರಾತ್‌ ಗಲಭೆ ಪ್ರಕರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸರ್ವೋಚ್ಛ ನ್ಯಾಯಾಲಯ ಕ್ಲಿನ್‌ ಚಿಟ್‌ ನೀಡಿದೆ. ಈ ಆ ಮೂಲಕ ಗಲಭೆಯಲ್ಲಿ ಮೋದಿ ಅವರ ಪಾತ್ರ ಇಲ್ಲ ಎನ್ನುವ ಎಸ್‌ಐಟಿಯ ತೀರ್ಮಾನವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಈ ಬಗ್ಗೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ತಳ್ಳಿ ಹಾಕಿದೆ.

2002ರ ಗಲಭೆ ವೇಳೆ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು. ಈ ಗಲಭೆಯಲ್ಲಿ ಖುದ್ದು ಮೋದಿಯವರ ಕೈವಾಡ ಇದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಪ್ರಕರಣದ ತನಿಖೆ ನಡೆಸಿದಿ ವಿಶೇಷ ತನಿಖಾ ದಳ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮೋದಿ ಅವರ ಮೇಲಿನ ಆರೋಪವನ್ನು ತಳ್ಳಿ ಹಾಕಿತ್ತು.

ಎಸ್‌ಐಟಿಯ ಈ ನಿರ್ಧಾರವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಎಸ್‌ಐಟಿಯ ನಿರ್ಧಾರವನ್ನು ಎತ್ತಿ ಹಿಡಿದಿದೆ. ಆ ಮೂಲಕ ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಕೋಮು ಗಲಭೆಯಲ್ಲಿ ನರೇಂದ್ರ ಮೋದಿ ಅವರ ಪಾತ್ರ ಇಲ್ಲ ಎಂದು ಹೇಳಿ, ಮೇಲ್ಮನವಿಯನ್ನು ತಳ್ಳಿ ಹಾಕಿದೆ. ಗೋಧ್ರೋತ್ತರ ಗಲಭೆಯಲ್ಲಿ ನರೇಂದ್ರ ಮೋದಿ ಅವರ ಮೇಲೆ ಕೇಳಿ ಬಂದ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್‌ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು. ಸುದೀರ್ಘ ತನಿಖೆ ನಡೆಸಿದ ಎಸ್‌ಐಟಿ ಈ ಪ್ರಕರಣದಲ್ಲಿ ನರೇಂದ್ರ ಮೋದಿ ಹಾಗೂ ಆರೋಪಿ ಸ್ಥಾನದಲ್ಲಿ ಇರುವ ಇನ್ನಿತರ 63 ಮಂದಿಯ ಮೇಲೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಅವರನ್ನು ಖುಲಾಸೆಗೊಳಿಸಿತ್ತು.

ಎಸ್‌ಐಟಿಯ ಈ ತನಿಖಾ ವರದಿಯನ್ನು ಪ್ರಶ್ನಿಸಿ, ಪ್ರಕರಣದಲ್ಲಿ ಪೊಲೀಸ್‌ ಹಾಗೂ ರಾಜಕಾರಣಿಗಳ ಕುತಂತ್ರದ ಬಗ್ಗೆ ಹೊಸದಾಗಿ ತನಿಖೆ ನಡೆಸಬೇಕು ಎಂದು ಕೋರಿ ಗಲಭೆಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್‌ ಸಂಸದ ಇಷಾನ್‌ ಜಫ್ರಿ ಅವರ ಪತ್ನಿ ಝಕಿಯಾ ಜಫ್ರಿ ಎಂಬವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ಹಾಜರಾದರೇ, ಎಸ್‌ಐಟಿ ಪರ ಮುಕುಲ್‌ ರೋಹಟ್ಗಿ ವಾದ ಮಂಡಿಸಿದರು. ವಾದ ವಿವದಗಳನ್ನು ಆಲಿಸಿದ ಸುಪ್ರೀ ಕೋರ್ಟ್‌, ಮೋದಿ ಅವರನ್ನು ಖುಲಾಸೆಗೊಳಿಸಿದ ಎಸ್‌ಐಟಿಯ ತನಿಖಾ ವರದಿಯನ್ನು ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಎಂಎಂ ಖಾನ್ವಿಲ್ಕರ್‌, ನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ಸಿಟಿ ರವಿಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಎಸ್‌ಐಟಿ ವರದಿಯನ್ನು ಎತ್ತಿ ಹಿಡಿದು ತೀರ್ಪು ಪ್ರಕಟಿಸಿದೆ. ಅಲ್ಲಿಗೆ ಗೋಧ್ರೋತ್ತರ ಗಲಭೆಯಲ್ಲಿ ಪ್ರಧಾನಿ ಮೋದಿ ಅವರು ದೋಷಮುಕ್ತರಾಗಿದ್ದಾರೆ.

- Advertisement -
spot_img

Latest News

error: Content is protected !!