Saturday, May 11, 2024
HomeUncategorizedಸುಪ್ರೀಂ ಕೋರ್ಟ್ ನಲ್ಲಿ ಹಿಬಾಜ್ ವಿವಾದ ಕುರಿತ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಸುಪ್ರೀಂ ಕೋರ್ಟ್ ನಲ್ಲಿ ಹಿಬಾಜ್ ವಿವಾದ ಕುರಿತ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

spot_img
- Advertisement -
- Advertisement -

ನವದೆಹಲಿ; ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ  ಇಂದು ವಿಚಾರಣೆ ಮುಕ್ತಾಯಗೊಂಡಿದ್ದು, ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿರುವ ಸುಪ್ರೀಂ ಇಂದು ಈ ಪ್ರಕರಣದ ತೀರ್ಪುನ್ನು ಕಾಯ್ದಿರಿಸಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಇಂದು  ಕಾಯ್ದಿರಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಮುಸ್ಲಿಂ ಅರ್ಜಿದಾರರನ್ನು ಪ್ರತಿನಿಧಿಸುವ ಹಿರಿಯ ವಕೀಲ ದುಷ್ಯಂತ್ ದವೆ, ನಂಬಿಕೆ ಇರುವವರಿಗೆ ಹಿಜಾಬ್ ಅತ್ಯಗತ್ಯ. ನಂಬಿಕೆಯಿಲ್ಲದವರಿಗೆ ಇದು ಅನಿವಾರ್ಯವಲ್ಲ ಎಂದಿದ್ದಾರೆ. ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಅಧಿಕಾರ ನೀಡಿತು. ಇದಕ್ಕೂ ಮುನ್ನ, ಕರ್ನಾಟಕ ಹಿಜಾಬ್ ನಿಷೇಧವನ್ನು ಪ್ರಶ್ನಿಸಿದ ಮುಸ್ಲಿಂ ಮೇಲ್ಮನವಿದಾರರು ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ಶಾಲೆಗಳಲ್ಲಿ ಉಡುಪುಗಳನ್ನು ಧರಿಸುವುದರ ವಿರುದ್ಧದ ನಿರ್ದೇಶನವು ಅಲ್ಪಸಂಖ್ಯಾತ ಸಮುದಾಯಗಳನ್ನು ಬದಿಗೊತ್ತುವ ಮಾದರಿಯ ಭಾಗವಾಗಿದೆ ಎಂದು ಹೇಳಿದರು. 10 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.

- Advertisement -
spot_img

Latest News

error: Content is protected !!