Sunday, June 7, 2026
Homeತಾಜಾ ಸುದ್ದಿರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಆದೇಶ ನೀಡಿದ ಸುಪ್ರೀಂ ಕೋರ್ಟ್

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಆದೇಶ ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ: ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಸೇರಿದಂತೆ 6 ಮಂದಿಯನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ಅವಧಿಗೆ ಮೊದಲೇ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ರಾಜೀವ್ ಗಾಂಧಿ ಹಂತಕರು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಸಿರುವ ಅರ್ಜಿಗೆ ತಮಿಳುನಾಡು ಸರ್ಕಾರ ಬೆಂಬಲ ನೀಡಿದೆ. ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡುವಂತೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.

- Advertisement -

Latest News

error: Content is protected !!